23.5 C
Karnataka
Friday, March 20, 2026
spot_img

ಗೆಜೆಟೆಡ್ ಪ್ರೊಬೇಷನರ್ಸ್: ವ್ಯಕ್ತಿತ್ವ ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಮಾರ್ಚ್ 20 (ಕರ್ನಾಟಕ ವಾರ್ತೆ) :

ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಸಂಬಂಧಿಸಿದಂತೆ ನಡೆಸಲು ಉದ್ದೇಶಿಸಿದ್ದ ವ್ಯಕ್ತಿತ್ವ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣಗಳಿಂದಾಗಿ ಸದ್ಯಕ್ಕೆ ಮುಂದೂಡಲಾಗಿದೆ ಎಂದು ಆಯೋಗ ತಿಳಿಸಿದೆ.

ಈ ಹಿಂದೆ ದಿನಾಂಕ: 10-03-2026 ರಂದು ಆಯೋಗದ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದ ವೇಳಾಪಟ್ಟಿಯಂತೆ, ಅರ್ಹ ಅಭ್ಯರ್ಥಿಗಳಿಗೆ ಮಾರ್ಚ್ 23 ರಿಂದ ಮೇ 04 ರವರೆಗೆ ವ್ಯಕ್ತಿತ್ವ ಪರೀಕ್ಷೆ ಹಾಗೂ ಮೂಲ ದಾಖಲೆಗಳ ಪರಿಶೀಲನೆಯನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಅನಿವಾರ್ಯ ಆಡಳಿತಾತ್ಮಕ ಕಾರಣಗಳಿಂದಾಗಿ ಈ ವೇಳಾಪಟ್ಟಿಯನ್ನು ಈಗ ಹಿಂಪಡೆಯಲಾಗಿದೆ.

ವ್ಯಕ್ತಿತ್ವ ಪರೀಕ್ಷೆಯ ಪರಿಷ್ಕøತ ದಿನಾಂಕಗಳು ಮತ್ತು ಸಮಯದ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಆಯೋಗದ ಅಧಿಕೃತ ವೆಬ್‍ಸೈಟ್‍ನಲ್ಲಿ ಶೀಘ್ರವಾಗಿ ಪ್ರಕಟಿಸಲಾಗುವುದು ಎಂದು ಆಯೋಗದ ಕಾರ್ಯದರ್ಶಿಗಳಾದ ಜ್ಯೋತಿ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!