23.5 C
Karnataka
Friday, March 20, 2026
spot_img

ಮಾರ್ಚ್ 26ರಂದು ರಾಯಚೂರು ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸಭೆ

ಬೆಂಗಳೂರು, ಮಾರ್ಚ್ 20 (ಕರ್ನಾಟಕ ವಾರ್ತೆ) :

ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನ್ಯಾಯ ಒದಗಿಸುವ ನಿಟ್ಟಿನಲ್ಲಿ, 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದಡಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ರಾಯಚೂರು ಜಿಲ್ಲೆಯಲ್ಲಿ ಮಾರ್ಚ್ 26 ರಂದು ವಿಶೇಷ ಸಭೆಯನ್ನು ಹಮ್ಮಿಕೊಂಡಿದೆ.

ರಾಯಚೂರು ಜಿಲ್ಲೆಗೆ ಸಂಬಂಧಿಸಿದಂತೆ ಆಯೋಗದಲ್ಲಿ ಈಗಾಗಲೇ ನೋಂದಣಿಯಾಗಿರುವ ಬಾಕಿ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸುವುದು ಮತ್ತು ವಿಲೇವಾರಿ ಮಾಡುವುದು ಈ ಸಭೆಯ ಮುಖ್ಯ ಉದ್ದೇಶವಾಗಿದೆ.

ಆಯೋಗದಲ್ಲಿ ಈಗಾಗಲೇ ಪ್ರಕರಣ ದಾಖಲಿಸಿರುವ ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸಭೆಯ ಸದುಪಯೋಗ ಪಡಿಸಿಕೊಳ್ಳಬಹುದು. ಸಾರ್ವಜನಿಕರ ಹಿತದೃಷ್ಟಿಯಿಂದ, ಅಂದು ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹೊಸ ದೂರುಗಳನ್ನು / ಅಹವಾಲುಗಳನ್ನು ಸಹ ಸ್ವೀಕರಿಸಲಾಗುವುದು.

ಸಾರ್ವಜನಿಕರು ನಿಗದಿತ ದಿನಾಂಕದಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು (ಹಂಗಾಮಿ) ಹಾಗೂ ಸದಸ್ಯರನ್ನು ಖುದ್ದಾಗಿ ಭೇಟಿ ಮಾಡಿ ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ.

ಮಾನವ ಹಕ್ಕುಗಳ ರಕ್ಷಣೆಗಾಗಿ ಆಯೋಗವು ಕೈಗೊಂಡಿರುವ ಈ ಕ್ರಮದ ಸದುಪಯೋಗವನ್ನು ರಾಯಚೂರು ಜಿಲ್ಲೆಯ ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ (ಪ್ರ) ಎ. ದಿನೇಶ್ ಸಂಪತ್‍ರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!