ಬೆಂಗಳೂರು, ಅಕ್ಟೋಬರ್ 05 (ಕರ್ನಾಟಕ ವಾರ್ತೆ) :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ -2023 ನೇ ಸಾಲಿಗೆ “ಹೊಯ್ಸಳ” ಮತ್ತು “ಕೆಳದಿ ಚೆನ್ನಮ್ಮ” ಪ್ರಶಸ್ತಿಗಾಗಿ ಅರ್ಹ ಮಕ್ಕಳು ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳು, ಸಂಸ್ಥೆಗಳನ್ನು ಗುರುತಿಸಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಶಸ್ತಿಗಾಗಿ ಆಯ್ಕೆ ಮಾಡಲು, ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ದೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆಯಂದು ನೀಡಿ ಗೌರವಿಸಲಾಗುತ್ತದೆ.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ. 25, 000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ. 1,00000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.