ಹುಬ್ಬಳ್ಳಿ (ಕರ್ನಾಟಕವಾರ್ತೆ) ಅ.7: ತಾಲೂಕು ಪಂಚಾಯತ ವತಿಯಿಂದ ಅಕ್ಟೋಬರ್ 28 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಪಂಚಾಯತ ಸಭಾಭವನದಲ್ಲಿ ಅಕ್ಟೋಬರ್ 13 ರಂದು ಮಧ್ಯಾಹ್ನ 12 ಗಂಟೆಗೆ ತಹಶೀಲ್ದಾರರವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಸಭೆಗೆ ತಾಲ್ಲೂಕು ಮಟ್ಟದ ಪರಿಶಿಷ್ಟ ಪಂಗಡದ ಮತ್ತು ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಾರಿದ್ದು, ಅಗತ್ಯ ಸಲಹೆ ಸೂಚನೆಗಳನ್ನು ನೀಡಬೇಕೆಂದು ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.