23 C
Karnataka
Saturday, March 21, 2026
spot_img

ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆ ತರಬೇತಿ

ಬೆಂಗಳೂರು, ನವೆಂಬರ್ 17 (ಕರ್ನಾಟಕ ವಾರ್ತೆ) :

ಕರ್ನಾಟಕರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ನವೆಂಬರ್ 24 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವÀ ಪ್ರೊ. ಕೆ.ಎಲ್.ಎನ್ ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!